ಪಾಲನ್‌ಪುರ್(ಗುಜರಾತ್): ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ಗುಜರಾತ್‌ನ ಪಾಲನ್‌ಪುರ್ ಎಂಬಲ್ಲಿ ಸಂಭವಿಸಿದೆ.
ದುರಂತದಲ್ಲಿ ಕೆಲವರು ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.