ತ್ರಿಪುರ: ಲೆವೆಲ್ ಕ್ರಾಸಿಂಗ್ ನಿರ್ಮಾಣಕ್ಕೆ ಒತ್ತಾಯಿಸಿ ನೂರಾರು ಗ್ರಾಮಸ್ಥರು ಉತ್ತರ ತ್ರಿಪುರದ ಪಾಣಿಸಾಗರ್ ಪ್ರದೇಶದಲ್ಲಿ ರೈಲ್ವೆ ಹಳಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಈ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಇಲ್ಲದಿರುವ ಕಾರಣ ಈ ರೈಲ್ವೆ ಮಾರ್ಗವು ಸ್ಥಳೀಯರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಸ್ಥಳೀಯರ ಪ್ರಕಾರ, ಟ್ರ್ಯಾಕ್ ದಾಟುವಾಗ ರೈಲು ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ರೈಲ್ವೆ ಕ್ರಾಸಿಂಗ್ ಅಥವಾ ಓವರ್ ಬ್ರಿಡ್ಜ್ ನಿರ್ಮಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ನಾವು ಪ್ರತಿಭಟನೆ ಮುಂದುವರಿಸುತ್ತೇವೆ" ಎಂದು ಉತ್ತರದ ಪಾಣಿಸಾಗರ್ ಪ್ರದೇಶದ ಸ್ಥಳೀಯರೊಬ್ಬರು ಹೇಳಿದ್ದಾರೆ.