ಹೈದರಾಬಾದ್: ಇಂದು ತೆಲಂಗಾಣ ರಾಜ್ಯ ಸ್ಥಾಪನಾ ದಿನವಾಗಿದ್ದು, ಈ ದಿನವನ್ನು ಆಚರಿಸಲು ಮುತ್ತಿನ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಇದಕ್ಕಾಗಿ ತೆಲಂಗಾಣ ಅಸೆಂಬ್ಲಿ ಕಟ್ಟಡ ಸೇರಿದಂತೆ ನಗರದ ಪ್ರಮುಖ ಸರ್ಕಾರಿ ಕಚೇರಿಗಳು ಝಗಮಗಿಸುವ ವಿದ್ಯುತ್ ದೀಪಾಲಂಕಾರ ಹಾಗೂ ಹೂಗಳಿಂದ ಸಿಂಗಾರಗೊಂಡಿವೆ. ತೆಲಂಗಾಣ ರಾಜ್ಯ ರಚನೆಯಾದ ಈ ಶುಭ ದಿನದ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂದು ರಾಷ್ಟ್ರಧ್ವಜ ಹಾರಿಸಿ ಸಂಸ್ಥಾಪನಾ ದಿನ ಆಚರಿಸಲಾಗುತ್ತೆ. ಇದೇ ವೇಳೆ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಕೆ.ಚಂದ್ರಶೇಖರ್ ರಾವ್ ಭಾಗಿಯಾಗಲಿದ್ದಾರೆ.
ಇನ್ನು ತೆಲಂಗಾಣ ಸಂಸ್ಥಾಪನಾ ದಿನದ ಪ್ರಯುಕ್ತ ಸಿಎಂ ಕೆಸಿಆರ್ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. 2014, ಜೂನ್ 2ರಂದು ತೆಲಂಗಾಣ ರಾಜ್ಯ ರಚನೆಯಾಯಿತು. ರಾಜ್ಯ ರಚನೆಯಾಗಿ 5 ವರ್ಷ ಕಳೆದಿದ್ದು, ಇದೀಗ 6ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.