ETV Bharat / bharat

ಕೋವಿಡ್​​​ನಿಂದ ಚೇತರಿಸಿಕೊಂಡ ರೋಗಿಗೆ ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆ

ಕೋವಿಡ್-19 ನಿಂದ ಚೇತರಿಸಿಕೊಂಡ ವ್ಯಕ್ತಿಯೊಬ್ಬರಿಗೆ ಟ್ರಿಪಲ್ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

bypass surgery
bypass surgery
author img

By

Published : Jul 21, 2020, 1:15 PM IST

ಹೈದರಾಬಾದ್ (ತೆಲಂಗಾಣ): ಕೋವಿಡ್-19ರಿಂದ ಚೇತರಿಸಿಕೊಂಡ 63 ವರ್ಷದ ವ್ಯಕ್ತಿಯೊಬ್ಬರು ಟ್ರಿಪಲ್ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದು ದೇಶದಲ್ಲೇ ಮೊದಲ ಪ್ರಕರಣವಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

"ಹೈದರಾಬಾದ್‌ನ ಬಂಜಾರ ಹಿಲ್ಸ್‌ನ ಕೇರ್ ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸೆಯ ನಿರ್ದೇಶಕ ಮತ್ತು ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ.ಪ್ರತೀಕ್ ಭಟ್ನಾಗರ್ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಕೋವಿಡ್ -19ನಿಂದ ಚೇತರಿಸಿಕೊಂಡ ರೋಗಿಯನ್ನು ಜುಲೈ 16, 2020ರಂದು ಡಾ. ಭಟ್ನಾಗರ್ ಅವರ ಅಡಿ ಟ್ರಿಪಲ್ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಕೊರೊನಾದಿಂದ ಚೇತರಿಸಿಕೊಂಡ ಬಳಿಕ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಿದ ಮೊದಲ ಪ್ರಕರಣ ಇದಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.