ETV Bharat / bharat

ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ, ಯಾವುದೇ ರೋಗದಿಂದ ಬಳಲುತ್ತಿಲ್ಲ: ಅಮಿತ್​ ಶಾ - ಅಮಿತ್​ ಶಾ ಆರೋಗ್ಯ ಸುದ್ದಿ

ನನ್ನ ಆರೋಗ್ಯದಲ್ಲಿ ಯಾವುದೇ ಏರುಪೇರು ಆಗಿಲ್ಲ, ಸಂಪೂರ್ಣವಾಗಿ ಆರೋಗ್ಯದಿಂದ ಇದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಟ್ವೀಟ್​ ಮಾಡಿದ್ದಾರೆ. ಅಹಮದಾಬಾದ್‌ನಲ್ಲಿ ಈ ಕುರಿತು ಸುಳ್ಳು ಸುದ್ದಿ ಹರಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Amit Shah
Amit Shah
author img

By

Published : May 9, 2020, 5:13 PM IST

Updated : May 9, 2020, 5:33 PM IST

ನವದೆಹಲಿ: ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಯಾವುದೇ ತೊಂದರೆ ಅಥವಾ ಅನಾರೋಗ್ಯದಿಂದ ಬಳಲುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸ್ಪಷ್ಟಪಡಿಸಿದ್ದಾರೆ.

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬುತ್ತಿದ್ದಂತೆ ಟ್ವೀಟ್​ ಮಾಡಿ ಸ್ಪಷ್ಟನೆ ನೀಡಿದ ಸಚಿವರು, ನನ್ನ ಆರೋಗ್ಯದ ಬಗ್ಗೆ ಯಾವುದೇ ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

  • मेरे स्वास्थ्य की चिंता करने वाले सभी लोगों को मेरा संदेश। pic.twitter.com/F72Xtoqmg9

    — Amit Shah (@AmitShah) May 9, 2020 " class="align-text-top noRightClick twitterSection" data=" ">

ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿರುವ 55 ವರ್ಷದ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದು, ಅದಕ್ಕೆ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಯಾವುದೇ ಸೋಂಕು ಅಥವಾ ಕಾಯಿಲೆಯಿಂದ ಬಳಲುತ್ತಿಲ್ಲ ಎಂದಿದ್ದಾರೆ. ನಾನು ನಿಮ್ಮ ಬಳಿ ಮನವಿ ಮಾಡಿಕೊಳ್ಳುತ್ತಿದ್ದು, ನನ್ನ ಆರೋಗ್ಯದ ಬಗ್ಗೆ ಮಾತನಾಡುವುದು ಬಿಟ್ಟು ಕೆಲಸ ಮಾಡುವುದಕ್ಕೆ ಬಿಡಿ. ನೀವೂ ನಿಮ್ಮ ಕೆಲಸ ಮಾಡಿ ಎಂದಿದ್ದು, ನನ್ನ ಆರೋಗ್ಯದ ಬಗ್ಗೆ ವಿಶ್​ ಮಾಡಿದವರಿಗೆ ಧನ್ಯವಾದಗಳು ಎಂದಿದ್ದಾರೆ.

ಅಹಮದಾಬಾದ್​ ಪೊಲೀಸರಿಂದ ಸುದ್ದಿಗೋಷ್ಠಿ

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಕೊರೊನಾ ಇದೆ ಎಂದು ಸುದ್ದಿ ಹಬ್ಬಿಸಿದ್ದ ನಾಲ್ವರು ಆರೋಪಿಗಳನ್ನ ಗುಜರಾತ್​ನ ಅಹಮದಾಬಾದ್​ ಪೊಲೀಸರು ಬಂಧಿಸಿದ್ದಾರೆ. ಇವರನ್ನ ಫಿರೋಜ್​ ಖಾನ್​, ಸರ್ಫರಾಜ್​, ಸಾಝಿದ್​ ಅಲಿ ಹಾಗೂ ಶಾರಿಜ್​ ಹುಸೇನ್​ ಎಂದು ಗುರುತಿಸಲಾಗಿದೆ ಎಂದು ಅಹಮದಾಬಾದ್​ ಕ್ರೈಂ ಬ್ರಾಂಚ್​ ಅಜಯ್​ ತೋಮರ್​ ಮಾಹಿತಿ ನೋಡಿದ್ದಾರೆ.

Last Updated : May 9, 2020, 5:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.