ಮುಂಬೈ: ಇತರರನ್ನು ಬೆದರಿಸುವ ಸಿಎಂ ಅನ್ನು ನಾನು ಇತಿಹಾಸದಲ್ಲಿಯೇ ನೋಡಿಲ್ಲ ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಠಾಕ್ರೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೋವಿಡ್ ಸಾವು ಮರೆ ಮಾಚಲಾಗಿದೆ : ಮಹಾ ಸರ್ಕಾರದ ವಿರುದ್ಧ ಫಡ್ನವಿಸ್ ವಾಗ್ದಾಳಿ
ಠಾಕ್ರೆ ಸರ್ಕಾರ ಇಂದಿಗೆ ಒಂದು ವರ್ಷವನ್ನು ಪೂರೈಸುತ್ತಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.