ನವದೆಹಲಿ : ಇದೇ ತಿಂಗಳಿನಲ್ಲಿ ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆ ಮಾತನಾಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾನು ಭಾರತದ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿದ್ದೇನೆ ಎಂದಿದ್ದಾರೆ.
ನನ್ನ ಪ್ರಕಾರ ಭಾರತದಲ್ಲಿ ತೀವ್ರಗತಿಯಲ್ಲಿ ಸಾಕಷ್ಟು ಬೆಳವಣಿಗೆಗಳು ಜರುಗುತ್ತಿವೆ. ಹಾಗಾಗಿ ಉಭಯ ದೇಶಗಳಾದ ಭಾರತ ಮತ್ತು ಪಾಕಿಸ್ತಾನದ ನಾಯಕರ ಜೊತೆ ನಾನು ಮಾತನಾಡಲಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.
ಈ ಹಿಂದೆಯೂ ಕೂಡ ಜಮ್ಮು-ಕಾಶ್ಮೀರ ವಿವಾದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಟ್ರಂಪ್ ಹೇಳಿಕೊಂಡಿದ್ರು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದ ಭಾರತ ದೇಶದ ಆಂತರಿಕ ವಿಚಾರದಲ್ಲಿ ಬೇರೆಯವರು ಮೂಗುತೂರಿಸಲು ಬಿಡುವುದಿಲ್ಲ ಎಂದು ತಿರುಗೇಟು ನೀಡಿ ತಿರಸ್ಕರಿಸಿತ್ತು. ಇದೀಗ ಮತ್ತೆ ಮೋದಿ ಭಾರತ ಮತ್ತು ಪಾಕ್ ಜೊತೆ ಮಾತನಾಡುವುದಾಗಿ ಪುನರುಚ್ಛರಿಸಿದ್ದು, ಭಾರತ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.