ಇಡುಕ್ಕಿ: ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ಆಗಸ್ಟ್ 6 ರಂದು ಇಡುಕ್ಕಿಯ ರಾಜಮಾಲಾದ ಪೆಟ್ಟಿಮುಡಿಯಲ್ಲಿ ಭೂಕುಸಿತ ಉಂಟಾಗಿತ್ತು. ನಿನ್ನೆಯವರೆಗೂ 43 ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ಇದೀಗ ಮತ್ತೆ 6 ಮೃತದೇಹಗಳು ಸಿಕ್ಕಿದ್ದು, ಸಾವಿನ ಸಂಖ್ಯೆ 49ಕ್ಕೆ ಏರಿಕೆಯಾಗಿದೆ ಎಂದು ಇಡುಕ್ಕಿ ಜಿಲ್ಲಾಡಳಿತ ತಿಳಿಸಿದೆ.
ಭೂಕುಸಿತ ನಡೆದ ಪ್ರದೇಶದಲ್ಲಿ ಸುಮಾರು 80 ಜನರು ಇದ್ದರು. ಈ ಪೈಕಿ 12 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಮಣ್ಣಿನಡಿ ಸಿಲುಕಿರುವ ಉಳಿದವರಿಗಾಗಿ ಎನ್ಡಿಆರ್ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.