ಕುಪ್ವಾರ (ಜಮ್ಮು ಮತ್ತು ಕಾಶ್ಮೀರ): ಗಡಿಯಲ್ಲಿ ಉಗ್ರರ ವಿಧ್ವಂಸಕ ಕೃತ್ಯವನ್ನು ಭಾರತೀಯ ಸೇನೆ ಮತ್ತು ಪೊಲೀಸರು ವಿಫಲಗೊಳಿಸಿದ್ದು, ಕುಪ್ವಾರ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಐಇಡಿಯನ್ನು ಇಂದು ಮುಂಜಾನೆ ಪತ್ತೆ ಹಚ್ಚಿರುವ ಪೊಲೀಸರು ಅದನ್ನು ವಿಫಲಗೊಳಿಸಿದ್ದಾರೆ. ಆ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು-ಕಾಶ್ಮೀರ ಪೊಲೀಸರು, ಕುಪ್ವಾರ ಜಿಲ್ಲೆಯ ಅರಾಂಪೊರಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಉಗ್ರರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟಕವನ್ನು ಪತ್ತೆ ಹಚ್ಚಿದ್ದೇವೆ. ಬಾಂಬ್ ಪತ್ತೆ ಹಚ್ಚುವ ದಳವನ್ನು ಕರೆಸಿ ಅದನ್ನು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದ್ದೇವೆ ಎಂದಿದ್ದಾರೆ.