ಬೆಂಗಳೂರು/ ನವದೆಹಲಿ: ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಒಳನಾಡುಗಳಲ್ಲಿ ರೆಡ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಡಿಶಾ - ಪಶ್ಚಿಮ ಬಂಗಾಳ ಕರಾವಳಿಯ ವಾಯುವ್ಯ ಕೊಲ್ಲಿಯಲ್ಲಿ ರೂಪುಗೊಂಡ ಕಡಿಮೆ ಒತ್ತಡದಿಂದಾಗಿ ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮುಂಬೈ, ಥಾಣೆ, ಪಾಲ್ಘರ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ್‌ದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.