ನವದೆಹಲಿ/ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಆಂಧ್ರದ ಕರಾವಳಿ ಭಾಗ, ತಮಿಳು ನಾಡು, ಪುದುಚೇರಿಯಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕರ್ನಾಟಕ ಹಾಗೂ ಆಂಧ್ರದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರು ಮುಂದಿನ 48 ಗಂಟೆಗಳ ಕಾಲ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.