ನವದೆಹಲಿ: ಲಾಕ್‌ಡೌನ್‌ನಿಂದಾಗಿ ಸ್ವಗ್ರಾಮ ತಲುಪಲು ರಸ್ತೆ ಮಾರ್ಗವಾಗಿ ನಡೆದು ಸಾಗುತ್ತಿರುವ ವಲಸೆ ಕಾರ್ಮಿಕರನ್ನು ತಡೆದು ನಿಲ್ಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಅವಶ್ಯಕತೆ ಇದ್ದರೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.
ತಮ್ಮ ಊರುಗಳಿಗೆ ನಡೆದು ಹೋಗುತ್ತಿರುವ ವಲಸೆ ಕಾರ್ಮಿಕರು ಅಲ್ಲಲ್ಲಿ ಕುಸಿದು ಬಿದ್ದಿರುವ ನಿದರ್ಶನಗಳಿವೆ. ಆಯಾ ಪ್ರದೇಶಗಳ ಜಿಲ್ಲಾ ಅಧಿಕಾರಿಗಳು ಇಂತಹವರನ್ನು ಗುರುತಿಸಿ ವಸತಿ ಸೇರಿದಂತೆ ಇತರೆ ಸೌಕರ್ಯಗಳು ಕಲ್ಪಿಸಬೇಕು ಎಂದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಲಸೆ ಕಾರ್ಮಿಕರನ್ನು ತಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಕಾರ್ಮಿಕರನ್ನು ಊರುಗಳಿಗೆ ಕಳುಹಿಸಲು ಸರ್ಕಾರ ಭರವಸೆ ನೀಡದ ಹಿನ್ನೆಯಲ್ಲಿ 16 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದು ಮೃತಪಟ್ಟಿದ್ದಾರೆ ಎಂದು ದೂರುದಾರರು ಅರ್ಜಿಯಲ್ಲಿ ಉಲ್ಲೇಖಿಸಿದರು.
ದೂರದಾರರ ಈ ವಾದವನ್ನು ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಳ್ಳಿಹಾಕಿದ್ದಾರೆ. ಅಲ್ಲದೆ ದೇಶಾದ್ಯಂತ ಆಯಾ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಸ್ವಗ್ರಾಮಗಳಿಗೆ ಕಳುಹಿಸಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.