ನ್ಯೂಯಾರ್ಕ್: ಜಮ್ಮು-ಕಾಶ್ಮೀರ ವಿಚಾರವಾಗಿ ಪ್ರತಿದಿನ ಪಾಕ್ ಕಾಲು ಕೆರೆದು ಜಗಳಕ್ಕೆ ಹೋಗುತ್ತಿದ್ದು, ಇದೀಗ ಅದೇ ವಿಷಯವನ್ನಿಟ್ಟುಕೊಂಡು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.
ಕಣಿವೆ ರಾಜ್ಯಕ್ಕೆ ನೀಡಿರುವ ವಿಶೇಷ ಸ್ಥಾನಮಾನದ ಆರ್ಟಿಕಲ್ 370 ರದ್ಧತಿ ವಿಷಯವನ್ನೇ ವಿಶ್ವಸಂಸ್ಥೆಯಲ್ಲಿ ಚರ್ಚೆ ನಡೆಸಲು ಪಾಕ್ ಪತ್ರ ಬರೆದಿದ್ದು, ಇಂದು ಅದರ ಚರ್ಚೆ ಸಹ ನಡೆದಿದೆ. ಇದರ ಮಧ್ಯೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ 20 ನಿಮಿಷಗಳ ಕಾಲ ದೂರವಾಣಿ ಸಂಭಾಷಣೆ ನಡೆಸಿದ್ದಾಗಿ ತಿಳಿದು ಬಂದಿದೆ.
ಈ ವೇಳೆ ಪಾಕ್ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಸಹ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ. ಇನ್ನು ವಿಶ್ವಸಂಸ್ಥೆಯಲ್ಲಿ ಇದೇ ವಿಷಯವಾಗಿ ಭದ್ರತಾ ಮಂಡಳಿಯಲ್ಲಿ ಚರ್ಚೆ ನಡೆದಿದ್ದು, ಭಾರತದ ಪರ ರಷ್ಯಾ ಬ್ಯಾಟ್ ಬೀಸಿದೆ. ಕಾಶ್ಮೀರ ವಿಚಾರವೊಂದು ದ್ವಿಪಕ್ಷೀಯ ಸಮಸ್ಯೆಯಾಗಿದ್ದು, ಅದನ್ನ ಉಭಯ ದೇಶಗಳು ಸಭೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದೆ.