ETV Bharat / bharat

ರಾಜಸ್ಥಾನ ಹೈಡ್ರಾಮಾ: ಕೇಂದ್ರ ಸಚಿವ, ಬಂಡಾಯ ಶಾಸಕನ ವಿರುದ್ಧ ಕೇಸ್, ಉದ್ಯಮಿ ಅರೆಸ್ಟ್​ - ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾ

ಆಡಿಯೋ ರೆಕಾರ್ಡಿಂಗ್‌ಗಳ ಆಧಾರದ ಮೇಲೆ ರಾಜಸ್ಥಾನ ಸರ್ಕಾರವನ್ನು ಬೀಳಿಸಲು ಸಂಚು ರೂಪಿಸಿದ್ದಾರೆ ಎಂಬ ಆರೋಪದಡಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಬಂಡಾಯ ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾ ವಿರುದ್ಧ ಕೇಸ್​ ದಾಖಲಾಗಿದೆ. ಉದ್ಯಮಿ ಸಂಜಯ್ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಲಾಗಿದೆ.

Rajasthan Drama
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್
author img

By

Published : Jul 17, 2020, 3:46 PM IST

ಜೈಪುರ: ರಾಜಸ್ಥಾನ ಸರ್ಕಾರವನ್ನು ಬೀಳಿಸಲು ಸಂಚು ರೂಪಿಸಿದ್ದಾರೆ ಎಂಬ ಆರೋಪದ ಮೇಲೆ ಬಂಡಾಯ ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾ ಜೊತೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಕೂಡ ಪ್ರಕರಣ ದಾಖಲಾಗಿದೆ.

ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡಾಯ ಶಾಸಕರು ಬಿಜೆಪಿಯೊಂದಿಗೆ ಸಂಚು ಹೂಡಿದ್ದಾರೆ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಹಾಗೂ ಉದ್ಯಮಿ ಸಂಜಯ್ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಸಂಜಯ್ ಜೈನ್​ರನ್ನು ಬಂಧಿಸಲಾಗಿದೆ. ಆದರೆ ಬಿಜೆಪಿ ಮಾತ್ರ ಸಂಜಯ್ ಜೈನ್ ಜೊತೆ ಯಾವುದೇ ಸಂಪರ್ಕವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದೆ.

ಬಿಜೆಪಿಯೊಂದಿಗೆ ಕೈ ಜೋಡಿಸಿ ಸರ್ಕಾರ ಬೀಳಿಸುವ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಆಡಿಯೋ ಪುರಾವೆ ನೀಡಿದ ರಾಜ್ಯ ಕಾಂಗ್ರೆಸ್​ ಬಂಡಾಯ ಶಾಸಕರಾದ ಭನ್ವರ್ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಎರಡು ಆಡಿಯೋ ರೆಕಾರ್ಡಿಂಗ್‌ಗಳು ಹೊರಬಂದಿದ್ದು, ಒಂದರಲ್ಲಿ ಭನ್ವರ್ ಲಾಲ್ ಶರ್ಮಾ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿರುವ ಹಾಗೂ ಇನ್ನೊಂದರಲ್ಲಿ ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿರುವುದು ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ಶೇಖಾವತ್, ಆಡಿಯೊದಲ್ಲಿರುವುದು ನನ್ನ ಧ್ವನಿಯಲ್ಲ. ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ, ವಿಚಾರಣೆಗೆ ಕರೆದರೆ ಖಂಡಿತವಾಗಿಯೂ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.