ನವದೆಹಲಿ: ವೈಯಕ್ತಿಕ ತೆರಿಗೆದಾರರು 2019-20ನೇ ಸಾಲಿನ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಡಿಸೆಂಬರ್ 31 ರವರೆಗೆ ಒಂದು ತಿಂಗಳು ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಹೌದು, ಆದಾಯ ತೆರಿಗೆ ರಿಟರ್ನ್ ಫೈಲಿಂಗ್ ಗಡುವನ್ನು 2021 ಜನವರಿ 31 ರವರೆಗೆ ಎರಡು ತಿಂಗಳು ವಿಸ್ತರಿಸಲಾಗಿದೆ. ಈ ಹಿಂದೆ ಅಕ್ಟೋಬರ್ 31, 2020ರ ಒಳಗೆ ಐಟಿಆರ್ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ, ಕೊರೊನಾ ಹಿನ್ನೆಲೆ ಜನವರಿ 31, 2021ಕ್ಕೆ ಈ ಗಡುವನ್ನು ವಿಸ್ತರಿಸಲಾಗಿದೆ.
ಕೇಂದ್ರಿಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಈ ಕುರಿತು ಮಾಹಿತಿ ಹೊರಡಿಸಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ತೆರಿಗೆದಾರರಿಗೆ ಹೆಚ್ಚಿನ ಸಮಯ ನೀಡುವ ಸಲುವಾಗಿ ಗಡುವನ್ನು ವಿಸ್ತರಿಸಲಾಗಿದೆ ಎಂದು ಹೇಳಿದೆ.