ನವದೆಹಲಿ: ಕೊಲ್ಲಿ ರಾಷ್ಟ್ರಗಳಿಗೆ ಭಾರತ ಪ್ರಮುಖವಾಗಿದೆ. ಏಷ್ಯಾ ವಲಯದಲ್ಲಿ ಪ್ರಾದೇಶಿಕ ಉದ್ವಿಗ್ನತೆ ಶಮನಗೊಳಿಸುವಲ್ಲಿ ಭಾರತ ಮುಖ್ಯ ಪಾತ್ರ ನಿರ್ವಹಿಸಲಿದೆ ಎಂದು ಇರಾನ್ ವಿದೇಶಾಂಗ ಸಚಿವ ಜಾವೇದ್ ಜಾರಿಫ್ ಹೇಳಿದ್ದಾರೆ.
ಇರಾನ್‌ನ ಜನರಲ್ ಖಾಸಿಮ್ ಸುಲೈಮಾನಿ ಹತ್ಯೆಯ ಬಳಿಕ ಅಮೆರಿಕ ಮತ್ತು ಇರಾನ್ ನಡುವಿನ ಬಿಕ್ಕಟ್ಟಿನ ಮಧ್ಯೆ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಉಭಯ ದೇಶಗಳ ನಡುವಿನ ಹಳಸಿದ ಸಂಬಂಧ ಸಾಧ್ಯವಾದಷ್ಟು ಬೇಗ ಶಮನಗೊಳ್ಳಲು ಭಾರತ ಬಯಸುತ್ತದೆ. ಇರಾನ್, ಯುಎಇ, ಒಮನ್ ಮತ್ತು ಕತಾರ್ ಸೇರಿದಂತೆ ಇತರೆ ರಾಷ್ಟ್ರಗಳೊಂದಿಗೆ ಭಾರತ ಉತ್ತಮ ಸ್ನೇಹ ಸಂಬಂಧ ಹೊಂದಿದ್ದು, ಈ ವ್ಯಾಪ್ತಿಯಲ್ಲಿ ಪ್ರಮುಖ ರಾಷ್ಟ್ರವಾಗಿದೆ ಎಂದು ಅಭಿಪ್ರಾಯಪಟ್ಟರು.
ಇರಾನ್ ಸೇರಿದಂತೆ ಇತರ ಗಲ್ಫ್ ರಾಷ್ಟ್ರಗಳಲ್ಲಿ ಶಾಂತಿ, ಭದ್ರತೆ ಮತ್ತು ಸುಸ್ಥಿರತೆ ಕಾಪಾಡುವತ್ತ ಭಾರತ ಹೆಚ್ಚಿನ ಆಸಕ್ತಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.