ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಶಿಲಾನ್ಯಾಸ ನೆರವೇರಿಸಿದ್ದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ವಿದೇಶಗಳಿಂದಲೂ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ನೆರೆಯ ಪಾಕಿಸ್ತಾನ ಮಾತ್ರ ತನ್ನ ನರಿಬುದ್ಧಿ ಪ್ರದರ್ಶಿಸಿದೆ.
ಪಾಕಿಸ್ತಾನ ಹೇಳಿದ್ದೇನು?:
ಬಾಬರಿ ಮಸೀದಿ ಧ್ವಂಸ ಮಾಡಿದ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದು, ಇದು ಭಾರತದ ಅಸಹಿಷ್ಣುತೆಗೆ ಸಾಕ್ಷಿ. ಈ ಮೂಲಕ ಅಲ್ಪಸಂಖ್ಯಾತರ ಧಾರ್ಮಿಕ ನಂಬಿಕೆ ಹಾಗೂ ಆಚರಣೆಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಪಾಕ್ ಹೇಳಿಕೆ ನೀಡಿತ್ತು.
ಭಾರತದ ತಿರುಗೇಟು:
ಭಾರತದ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾತ್ಸವ್ ಪ್ರತಿಕ್ರಿಯಿಸಿ, ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಕೆಲಸ ಮಾಡಬಾರದು ಎಂದು ಚಾಟಿ ಬೀಸಿದ್ದಾರೆ.
ಪಾಕಿಸ್ತಾನದ ಈ ರೀತಿಯ ಹೇಳಿಕೆಗಳು ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದೆ. ಶ್ರೀರಾಮ ಮಂದಿರ ದೇಗುಲ ನಿರ್ಮಾಣವನ್ನು ಅಖಂಡ ಭಾರತ ಒಗ್ಗಟ್ಟಿನಿಂದ ಸ್ವಾಗತಿಸಿದೆ ಎಂದು ಅವರು ಹೇಳಿದ್ದಾರೆ.