ETV Bharat / bharat

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,788 ಕೊರೊನಾ ಸೋಂಕಿತರು ಪತ್ತೆ - ಭಾರತದಲ್ಲಿ ಕೊರೊನಾ ಪ್ರಕರಣಗಳು

ಇದುವರೆಗೆ 1,02,11,342 ಜನ ಗುಣಮುಖರಾಗಿದ್ದು, 2,08,012 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

India reports 13,788 new COVID19 cases
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,788 ಕೊರೊನಾ ಸೋಂಕಿತರು ಪತ್ತೆ
author img

By

Published : Jan 18, 2021, 9:48 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,788 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 145 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,05,71,773 ಕ್ಕೆ ಹಾಗೂ ಮೃತರ ಸಂಖ್ಯೆ 1,52,419ಕ್ಕೆ ಏರಿಕೆಯಾಗಿದೆ.

14,457 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದು, ಇದುವರೆಗೆ 1,02,11,342 ಜನ ಗುಣಮುಖರಾಗಿದ್ದಾರೆ. ಉಳಿದಂತೆ 2,08,012 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಇಂದು ಕೃಷಿ ಕಾನೂನು ಕುರಿತ 'ಸುಪ್ರೀಂ' ಸಮಿತಿಯ ಮೊದಲ ಸಭೆ

ಜನವರಿ​ 17 ರವರೆಗೆ 18,70,93,036 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 5,48,168 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.