ನವದೆಹಲಿ: ಭಾರತದಲ್ಲಿ ಕೋವಿಡ್ ಅಟ್ಟಹಾಸಕ್ಕೆ ಬಲಿಯಾದವರ ಸಂಖ್ಯೆ 18 ಸಾವಿರ ಗಡಿ ದಾಟಿದೆ. ವೈರಾಣು ಬಾಧೆಯಿಂದ ಚೇತರಿಕೆ ಕಾಣುತ್ತಿರುವ ಪ್ರಮಾಣ ಶೇ.60 ತಲುಪಿದೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 20,903 ಸೋಂಕಿತರು ಪತ್ತೆಯಾಗಿದ್ದಾರೆ. 379 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 6,25,544 ತಲುಪಿದ್ದು, 18,213 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಪೈಕಿ ಶೇ.60 ರಷ್ಟು ಅಂದರೆ 3,79,892 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,27,439 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.