ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,635 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 94 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,07,66,245 ಹಾಗೂ ಮೃತರ ಸಂಖ್ಯೆ 1,54,486 ಕ್ಕೆ ಏರಿಕೆಯಾಗಿದೆ.
ಆದರೆ ಒಟ್ಟು ಸೋಂಕಿತರ ಪೈಕಿ 1,04,48,406 ಮಂದಿ ಗುಣಮುಖರಾಗಿದ್ದು, 1,69,824 ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾ ವ್ಯಾಕ್ಸಿನೇಷನ್ ಪ್ರಮಾಣ ಕೂಡ ದಿನೇದಿನೆ ಹೆಚ್ಚುತ್ತಿದೆ. ಈವರೆಗೆ 39,50,156 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ.