ETV Bharat / bharat

24 ಗಂಟೆಗಳಲ್ಲಿ 24 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣ: ದೇಶದಲ್ಲಿ ಕೊರೊನಾ ನಾಗಾಲೋಟ - ಭಾರತದಲ್ಲಿ ಕೊರೊನಾರ್ಭಟ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,73,165ಕ್ಕೆ ಹಾಗೂ ಮೃತರ ಸಂಖ್ಯೆ 19,268ಕ್ಕೆ ಏರಿಕೆಯಾಗಿದೆ.

Total number of corona cases in India
ಕೋವಿಡ್​ 19
author img

By

Published : Jul 5, 2020, 10:22 AM IST

ನವದೆಹಲಿ: ದಿನದಿಂದ ದಿನಕ್ಕೆ ಭಾರತದಲ್ಲಿ ಕೊರೊನಾ ಪಸರಿಸುವಿಕೆ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ ಸುಮಾರು 25 ಸಾವಿರ ಕೇಸ್​ಗಳು ಪತ್ತೆಯಾಗಿವೆ. ಮೃತರ ಸಂಖ್ಯೆ ಕೂಡ 19 ಸಾವಿರದ ಗಡಿ ದಾಟಿದೆ. ಜೊತೆಗೆ ಚೇತರಿಕೆಯ ಪ್ರಮಾಣ ಕೂಡ ಶೇ.60.7ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 24,850 ಸೋಂಕಿತರು ಪತ್ತೆಯಾಗಿದ್ದಾರೆ. ಮಾತ್ರವಲ್ಲ ಅತಿ ಹೆಚ್ಚು ಸಾವು ಅಂದರೆ 613 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 6,73,165ಕ್ಕೆ ಹಾಗೂ ಮೃತರ ಸಂಖ್ಯೆ 19,268ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ ಶೇ.60.7 ಅಂದರೆ 4,09,083 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 2,44,814 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.