ನವದೆಹಲಿ: ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ನಿನ್ನೆ ಒಂದೇ ಸುಮಾರು 10 ಸಾವಿರ ಕೇಸ್ಗಳು ಪತ್ತೆಯಾಗಿದ್ದು, 300ಕ್ಕೂ ಅಧಿಕ ಸೋಂಕಿತರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 9,987 ಸೋಂಕಿತರು ಪತ್ತೆಯಾಗಿದ್ದು, 331 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಕ್ಕೆ ಹಾಗೂ ಮೃತರ ಸಂಖ್ಯೆ 7,466ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಅರ್ಧದಷ್ಟು ಅಂದರೆ 1,29,215 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದ ಅರ್ಧದಷ್ಟು (1,29,917) ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.