ETV Bharat / bharat

ಗಡಿಯಲ್ಲಿ ಪುನಃ ಶಾಂತಿ ಸ್ಥಾಪಿಸಲು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಿ: ಚೀನಾಕ್ಕೆ ಭಾರತ ಆಗ್ರಹ - ಚೀನಾಕ್ಕೆ ಭಾರತ ಹೇಳಿಕೆ

ಗಡಿಯಲ್ಲಿನ ಪರಿಸ್ಥಿತಿಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಮತ್ತು ಎರಡೂ ಕಡೆಯವರು ಯಾವುದೇ ಪ್ರಚೋದನಕಾರಿ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

MEA spokesperson Anurag Srivastava
ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ
author img

By

Published : Sep 4, 2020, 7:46 AM IST

ನವದೆಹಲಿ: ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಮರು ಸ್ಥಾಪಿಸಲು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕೆಂದು ಭಾರತವು ಚೀನಾವನ್ನು ಒತ್ತಾಯಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ, ಕಳೆದ ನಾಲ್ಕು ತಿಂಗಳುಗಳಲ್ಲಿ ನಾವು ಕಂಡ ಪರಿಸ್ಥಿತಿಯು ಎಲ್‌ಎಸಿಯಲ್ಲಿ ಏಕಪಕ್ಷೀಯವಾಗಿ ಯಥಾಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸಿ ಚೀನಾ ಕೈಗೊಂಡ ಕ್ರಮಗಳ ನೇರ ಪರಿಣಾಮವಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.

ದ್ವಿಪಕ್ಷೀಯ ಒಪ್ಪಂದಗಳು ಮತ್ತು ನಿಯಮಾವಳಿಗಳಿಗೆ ಅನುಸಾರವಾಗಿ ಸಂಪೂರ್ಣ ವಿಘಟನೆ ಮತ್ತು ಉಲ್ಬಣಗೊಳ್ಳುವಿಕೆ ನಿಲ್ಲಿಸಿ ಗಡಿ ಪ್ರದೇಶಗಳಲ್ಲಿ ಶಾಂತಿಯನ್ನು ತ್ವರಿತವಾಗಿ ಮರು ಸ್ಥಾಪಿಸುವ ಉದ್ದೇಶದಿಂದ ಭಾರತದೊಂದಿಗೆ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಲು ನಾವು ಚೀನಾವನ್ನು ಬಲವಾಗಿ ಒತ್ತಾಯಿಸುತ್ತೇವೆ ಎಂದು ಹೇಳಿದರು.

ಆಗಸ್ಟ್ 29ರ ರಾತ್ರಿ ಮತ್ತು ಆಗಸ್ಟ್ 30ರ ಮುಂಜಾನೆ ದಕ್ಷಿಣದ ಪ್ಯಾಂಗೊಂಗ್ ತ್ಸೋ ಸರೋವರದ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಚೀನಾದ ಸೈನಿಕರು ಮಾಡಿದ ಪ್ರಯತ್ನದ ನಂತರದ ಬೆಳವಣಿಗೆಗಳ ಕುರಿತು ಕೇಂದ್ರದ ನಿಲುವನ್ನು ಅವರು ಎತ್ತಿ ತೋರಿಸಿದರು.

ಪರಿಸ್ಥಿತಿಯನ್ನು ಪರಿಹರಿಸಲು ಕಮಾಂಡರ್‌ಗಳು ಇನ್ನೂ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿರುವ ಶ್ರೀವಾಸ್ತವ, ಗಡಿಯಲ್ಲಿನ ಪರಿಸ್ಥಿತಿಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಮತ್ತು ಎರಡೂ ಕಡೆಯವರು ಯಾವುದೇ ಪ್ರಚೋದನಕಾರಿ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದರು.

ಈ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾದ ರಾಜಧಾನಿ ಮಾಸ್ಕೋಗೆ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ. ಹಲವಾರು ವ್ಯಾಪಾರ ಕಾರ್ಯಕ್ರಮಗಳ ಅನುಷ್ಠಾನವನ್ನು ತ್ವರಿತಗೊಳಿಸುವ ಉದ್ದೇಶದಿಂದ ರಾಜನಾಥ್ ಸಿಂಗ್ ಮಾಸ್ಕೋದಲ್ಲಿ ರಷ್ಯಾದ ರಕ್ಷಣಾ ಸಚಿವ ಸೆರ್ಗೆ ಶೋಯಿಗು ಮತ್ತು ಇತರ ಹಲವಾರು ಉನ್ನತ ಮಿಲಿಟರಿ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.