ನವದೆಹಲಿ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾಳಾಗುತ್ತಿದ್ದು, ಪ್ಲಾಸ್ಟಿಕ್ ವಸ್ತುಗಳನ್ನ ನಿರ್ಮೂಲನೆ ಮಾಡಬೇಕೆಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹೇಳಿದ್ದ ಪ್ರಧಾನಿ ಮೋದಿ ತಾವು ನುಡಿದಂತೆ ಪಾಸ್ಟಿಕ್ ವಸ್ತುಗಳನ್ನ ನಿಷೇಧಿಸಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಂದು ಆರು ರೀತಿಯ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನ ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಪ್ಲಾಸ್ಟಿಕ್ ಬ್ಯಾಗ್ಗಳು, ಕಪ್ಗಳು, ಫಲಕಗಳು, ಸಣ್ಣ ಬಾಟಲ್ಗಳು, ಸ್ಟ್ರಾ ಮತ್ತು ಕೆಲವು ಪ್ಲಾಸ್ಟಿಕ್ ವಸ್ತುಗಳನ್ನ ನಿಷೇಧಿಸಲು ಕೇಂದ್ರ ಮುಂದಾಗಿದೆ. ಈ ವಸ್ತುಗಳ ಉತ್ಪಾದನೆ, ಬಳಕೆ ಮತ್ತು ಆಮದನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಕ ಬಳಕೆಯ ಆರು ಪ್ಲಾಸ್ಟಿಕ್ ವಸ್ತುಗಳ ಮೇಲಿನ ನಿಷೇಧದಿಂದ ಭಾರತ ವಾರ್ಷಿಕ 14 ದಶಲಕ್ಷ ಟನ್‌ಗಳಷ್ಟು ಪ್ಲಾಸ್ಟಿಕ್ ಬಳಕೆಯಿಂದ ಮುಕ್ತವಾಗಲಿದೆ ಎಂದು ಹೇಳಲಾಗಿದೆ.