ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,100 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಇಲ್ಲಿಯವರೆಗೆ 88,14,579 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 4,79,216 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ಕಳೆದ 24 ಗಂಟೆಗಳಲ್ಲಿ 447 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 1,29,635 ಜನ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಿಳಿಸಿದೆ.
42,156 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ 82,05,728 ಸೋಂಕಿತರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 8,05,589 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ ಒಟ್ಟು 12,48,36,819 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.