ನವದೆಹಲಿ: ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ ಜಾಧವ್ ಅವರ ಭೇಟಿಗೆ ಪಾಕ್ ಅನುಮತಿ ನೀಡಿದ ವಿಚಾರಕ್ಕೆ ಭಾರತದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ ಜಾಧವ್ ಅವರ ಭೇಟಿಗೆ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಪಾಕಿಸ್ತಾನ ಸರ್ಕಾರ ಭಾನುವಾರ ಅನುಮತಿ ನೀಡಿತ್ತು.
ಭಾರತಕ್ಕೆ ಮತ್ತೊಂದು ಗೆಲುವು.. ಕುಲಭೂಷಣ ಜಾಧವ್ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಪಾಕ್ ಅನುಮತಿ
ಜಾಧವ್ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಪಾಕ್, ಜಾಧವ್ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿ ಮಾತುಕತೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿತ್ತು.
ಜಾಧವ್ ಅವರ ಭೇಟಿಗೆ ಭಾರತೀಯ ರಾಯಭಾರಿಗಳಿಗೆ ಅವಕಾಶ ನೀಡುತ್ತಿದ್ದೇವೆ. ವಿಯೆನ್ನಾ ಒಪ್ಪಂದ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಮಾನದಂತೆ ಹಾಗೂ ಪಾಕ್ ನ್ಯಾಯಾಂಗದ ಅನ್ವಯ ಅನುಮತಿ ನೀಡಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆಯ ವಕ್ತಾರ ಫೈಸಲ್ ಹೇಳಿದ್ದರು.