ನವದೆಹಲಿ: ಅಮರನಾಥ ಯಾತ್ರೆ ಕೈಗೊಳ್ಳುವ ಮಾರ್ಗದಲ್ಲಿ ಪಾಕಿಸ್ಥಾನ ಸೇನೆಗೆ ಸೇರಿದ ಟೆಲಿಸ್ಕೋಪ್, ಎಂ -24 ಸ್ನೈಪರ್ ರೈಫಲ್, ಐಇಡಿಗಳು ಮತ್ತು ನೆಲಬಾಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನಾಪಡೆ ಶುಕ್ರವಾರ ತಿಳಿಸಿದೆ.
ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್ ಅವರು, ಪಾಕಿಸ್ತಾನ ಸೇನೆಯು ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದೆ. ಅಮರನಾಥ ಯಾತ್ರೆ ಸಾಗುವ ಮಾರ್ಗದಲ್ಲಿನ ನೆಲಬಾಂಬ್ನ ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಅಹಿತಕರ ಘಟನೆ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಅವರು ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.