ETV Bharat / bharat

ಪಾಕ್ ಆಕ್ರಮಿತ ಕಾಶ್ಮೀರದ ಹಳ್ಳಿಯನ್ನ ವಶಪಡಿಸಿಕೊಂಡಿಲ್ಲ.. ಭಾರತೀಯ ಸೇನೆ ಸ್ಪಷ್ಟನೆ - ಭಾರತೀಯ ಸೇನೆ ಲೇಟೆಸ್ಟ್ ನ್ಯೂಸ್

ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಬೇಲಿ ತೆರೆದು ಪಾಕಿಸ್ತಾನ ಆಕ್ರಮಿತ-ಕಾಶ್ಮೀರದ ಭೂಪ್ರದೇಶವನ್ನು ಭಾರತೀಯ ಸೇನೆ ವಶಪಡಿಸಿಕೊಂಡಿಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಸೇನಾ ಮೂಲಗಳು ತಿಳಿಸಿವೆ.

ಭಾರತೀಯ ಸೇನೆ ಲೇಟೆಸ್ಟ್ ನ್ಯೂಸ್ ,Indian Army rubbishes social media claims
ಭಾರತೀಯ ಸೇನೆ ಸ್ಪಷ್ಟನೆ
author img

By

Published : Dec 21, 2019, 10:04 PM IST

ನವದೆಹಲಿ: ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಬೇಲಿ ತೆರೆದು ಪಾಕಿಸ್ತಾನ ಆಕ್ರಮಿತ-ಕಾಶ್ಮೀರದ ಭೂಪ್ರದೇಶವನ್ನು ಭಾರತೀಯ ಸೇನೆ ವಶಪಡಿಸಿಕೊಂಡಿದೆ ಎಂಬುದು ಸುಳ್ಳು ಸುದ್ದಿ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆಯನ್ನ ತೆರೆದು ಪಾಕ್ ಆಕ್ರಮಿತ ಕಾಶ್ಮೀರದ ಗ್ರಾಮವನ್ನ ವಶಪಡಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಇಂತಹ ಅನೇಕ ಸುದ್ದಿಗಳನ್ನ ಪಾಕಿಸ್ತಾನ ಮೂಲದ ಏಜೆನ್ಸಿಗಳು ಹರಡುತ್ತಿವೆ ಎಂದು ಸೇನಾ ಮುಲಗಳು ತಿಳಿಸಿವೆ.

ಇತ್ತೀಚೆಗಷ್ಟೆ ಭೂ ಸೇನೆ ಮುಖ್ಯಸ್ಥ ಬಿಪಿನ್ ರಾವತ್​ ಜಾಲತಾಣದಲ್ಲಿ ಹರಡುವ ಸುಳ್ಳು ಸುದ್ದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಬಹು ದೊಡ್ಡ ಪಾತ್ರ ವಹಿಸುತ್ತಿವೆ. ಜಾಲತಾಣದಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನ ನಿಯಂತ್ರಿಸುವುದು ದೊಡ್ಡ ಸವಾಲಿನ ಕೆಲಸವಾಗಿದೆ ಎಂದು ಬಿಪಿನ್ ರಾವತ್ ತಿಳಿಸಿದ್ದರು.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.