ಧುಲೆ(ಮಹಾರಾಷ್ಟ್ರ): ಅಜಂಗಾಲ್ ಎಂಬ ಹಳ್ಳಿ ಬಳಿ ಇಂಡಿಯನ್ ಆಯಿಲ್ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಆರು ಮಂದಿ ಸಾವಿಗೀಡಾಗಿದ್ದಾರೆ.
ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಕನಿಷ್ಠ 3 ಕಿ.ಮೀ. ವರೆಗೂ ದೊಡ್ಡ ಶಬ್ದ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.