ನವದೆಹಲಿ: ನಿನ್ನೆಗಿಂತ ದೇಶದಲ್ಲಿ ಕೊರೊನಾ ಪ್ರಕರಣಗಳು ಕೊಂಚ ಏರಿಕೆ ಕಂಡಿದ್ದು, ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳ 67 ಲಕ್ಷದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ 70,049 ಸೋಂಕಿತರು ಪತ್ತೆಯಾಗಿದ್ದು, 986 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67,57,132 ಹಾಗೂ ಮೃತರ ಸಂಖ್ಯೆ 1,04,555ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 57,44,694 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,07,883 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 6ರವರೆಗೆ 8 ಕೋಟಿಗೂ ಅಧಿಕ (8 ಕೋಟಿ 22 ಲಕ್ಷ 71 ಸಾವಿರಕ್ಕೂ ಅಧಿಕ) ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 11 ಲಕ್ಷ 99 ಸಾವಿರ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.