ನವದೆಹಲಿ: ಭಾರತದಲ್ಲಿ ಕಳೆದೆರಡು ದಿನಗಳಿಂದ 75 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ 34 ಲಕ್ಷ ಗಡಿಯತ್ತ ಸಾಗಿದೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 77,266 ಸೋಂಕಿತರು ಪತ್ತೆಯಾಗಿದ್ದು, 1,057 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 33,87,501ಕ್ಕೆ ಹಾಗೂ ಮೃತರ ಸಂಖ್ಯೆ 61,529ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 25,83,948 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 7,42,023 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 27ರ ವರೆಗೆ 3,94,77,848 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 9,01,338 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.