ನವದೆಹಲಿ: ಭಾರತದಲ್ಲಿ ಜಾಗತಿಕ ಮಹಾಮಾರಿಯ ಅಟ್ಟಹಾಸ ಮುಂದುವರೆದಿದ್ದು, ಇದೀಗ ದೇಶದಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ 30 ಲಕ್ಷದ ಗಡಿ ದಾಡಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 69,239 ಸೋಂಕಿತರು ಪತ್ತೆಯಾಗಿದ್ದು, 912 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 30,44,941ಕ್ಕೆ ಹಾಗೂ ಮೃತರ ಸಂಖ್ಯೆ 56,706ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 22,80,567 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 7,07,668 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 22ರ ವರೆಗೆ 3,52,92,220 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,01,147 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.