ನವದೆಹಲಿ: ದೇಶದಲ್ಲಿ ಕಳೆದೊಂದು ವಾರದಿಂದ ಪ್ರತಿನಿತ್ಯ 70 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 35 ಲಕ್ಷದ ಗಡಿ ದಾಡಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 78,761 ಕೇಸ್ಗಳು ಪತ್ತೆಯಾಗಿದ್ದು, 948 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 35,42,734ಕ್ಕೆ ಹಾಗೂ ಮೃತರ ಸಂಖ್ಯೆ 63,498ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 27,13,934 ಮಂದಿ ಗುಣಮುಖರಾಗಿ, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 7,65,302 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 29ರ ವರೆಗೆ 4 ಕೋಟಿಗೂ ಅಧಿಕ ಜನರಿಗೆ (4,14,61,636) ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,55,027 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.