ನವದೆಹಲಿ: ದೇಶದಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ 36 ಲಕ್ಷ ಗಡಿ ದಾಟಿದ್ದು, ಮೃತರ ಸಂಖ್ಯೆ 64 ಸಾವಿರ ಗಡಿ ದಾಟಿದೆ. ಆದರೆ ಶೇ. 76.74ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 78,512 ಸೋಂಕಿತರು ಪತ್ತೆಯಾಗಿದ್ದು, 971 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 36,21,246 ಹಾಗೂ ಮೃತರ ಸಂಖ್ಯೆ 64,469ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 27,74,802 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 7,81,975 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 30ರವರೆಗೆ 4 ಕೋಟಿಗೂ ಅಧಿಕ ಜನರಿಗೆ (4,23,07,914) ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,46,278 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.