ETV Bharat / bharat

ದೇಶದಲ್ಲಿ 42 ಲಕ್ಷ ಕೋವಿಡ್​ ಕೇಸ್​... ಬ್ರೆಜಿಲ್​ ಹಿಂದಿಕ್ಕಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟ ಭಾರತ!

ಪ್ರಪಂಚದ ಕೋವಿಡ್​ ಪೀಡಿತ ರಾಷ್ಟ್ರಗಳ ಪೈಕಿ ಮೂರನೇ ಸ್ಥಾನದಲ್ಲಿದ್ದ ಭಾರತ ಇದೀಗ ಬ್ರೆಜಿಲ್​ ಹಿಂದಿಕ್ಕಿ 2ನೇ ಸ್ಥಾನಕ್ಕೆ ದಾಪುಗಾಲಿಟ್ಟಿದೆ. ಬ್ರೆಜಿಲ್​​ನಲ್ಲಿ 41,37,606 ಜನರಿಗೆ ಸೋಂಕು ತಗುಲಿದ್ದರೆ, ಭಾರತದಲ್ಲಿ ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆಯಾಗಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​
author img

By

Published : Sep 7, 2020, 10:35 AM IST

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 42 ಲಕ್ಷ ಗಡಿ ದಾಟಿದ್ದು, ಇಲ್ಲಿಯವರೆಗೆ ಪ್ರಪಂಚದ ಕೋವಿಡ್​ ಪೀಡಿತ ರಾಷ್ಟ್ರಗಳ ಪೈಕಿ ಮೂರನೇ ಸ್ಥಾನದಲ್ಲಿದ್ದ ಭಾರತ ಇದೀಗ ಬ್ರೆಜಿಲ್​ ಹಿಂದಿಕ್ಕಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಕೇಸ್​ಗಳು ಎಂಬಂತೆ ದೇಶದಲ್ಲಿ ಬರೋಬ್ಬರಿ 90,802 ಸೋಂಕಿತರು ಪತ್ತೆಯಾಗಿದ್ದು, 1,016 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 42,04,614 ಹಾಗೂ ಮೃತರ ಸಂಖ್ಯೆ 71,642ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 32,50,429 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 8,82,542 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಸೆಪ್ಟೆಂಬರ್ 6ರ ವರೆಗೆ 4,95,51,507 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,20,362 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.