ನವದೆಹಲಿ: ಭಾರತದಲ್ಲಿ ಕೋವಿಡ್ ಅಬ್ಬರ ಹೆಚ್ಚಾಗಿದ್ದು, ಇದೀಗ ಕೇಸ್ಗಳ ಸಂಖ್ಯೆ 9 ಲಕ್ಷದ ಗಡಿ ದಾಟಿದೆ. ಇತ್ತ ಚೇತರಿಕೆಯ ಪ್ರಮಾಣ ಕೂಡ ಶೇ. 63.02ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 28,498 ಸೋಂಕಿತರು ಪತ್ತೆಯಾಗಿದ್ದು, 553 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 9,06,752ಕ್ಕೆ ಹಾಗೂ ಮೃತರ ಸಂಖ್ಯೆ 23,727ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ. 63.02 ರಷ್ಟು ಅಂದರೆ 5,71,460 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 3,11,565 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಚೇತರಿಕೆ ಹಾಗೂ ಸಾವಿನ ಅನುಪಾತ ಶೇ 96.01: 3.99 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.