ETV Bharat / bharat

ದೇಶದಲ್ಲಿ 45 ಲಕ್ಷ ಕೋವಿಡ್​ ಕೇಸ್​... 35 ಲಕ್ಷ ಸೋಂಕಿತರು ಗುಣಮುಖ

ಭಾರತದಲ್ಲಿ ನಿನ್ನೆ ಒಂದೇ ದಿನ 11,63,542 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, 96,551 ಮಂದಿಯ ವರದಿ ಪಾಸಿಟಿವ್​ ಬಂದಿದೆ.

India's COVID case tally crosses 45 lakh mark
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​
author img

By

Published : Sep 11, 2020, 10:19 AM IST

ನವದೆಹಲಿ: ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 4.5 ಮಿಲಿಯನ್​​ ಗಡಿ ದಾಟಿದೆ. 45 ಲಕ್ಷ ಕೇಸ್​ಗಳ ಪೈಕಿ 35 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಕೇಸ್​ಗಳು ಎಂಬಂತೆ ದೇಶದಲ್ಲಿ ಬರೋಬ್ಬರಿ 96,551 ಸೋಂಕಿತರು ಪತ್ತೆಯಾಗಿದ್ದು, 1,209 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 45,62,415 ಹಾಗೂ ಮೃತರ ಸಂಖ್ಯೆ 76,271ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 35,42,664 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 9,43,480 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

India's COVID case tally crosses 45 lakh mark
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಸೆಪ್ಟೆಂಬರ್ 6ರವರೆಗೆ 5,40,97,975 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,63,542 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.