ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇದೀಗ ಪ್ರಕರಣಗಳ ಸಂಖ್ಯೆ 52 ಲಕ್ಷ ಗಡಿ ದಾಟಿದೆ. ಆದರೆ ಚೇತರಿಕೆಯ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಶೇ.78ಕ್ಕೂ ಅಧಿಕ ರೋಗಿಗಳು (41 ಲಕ್ಷ ಜನರು) ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 96,424 ಸೋಂಕಿತರು ಪತ್ತೆಯಾಗಿದ್ದು, 1,174 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 52,14,678 ಹಾಗೂ ಮೃತರ ಸಂಖ್ಯೆ 84,372ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 41,12,552 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 10,17,754 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
![Total number of corona cases in India](https://etvbharatimages.akamaized.net/etvbharat/prod-images/8843512_lll.png)
ಸೆಪ್ಟೆಂಬರ್ 17ರವರೆಗೆ 6,15,72,343 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,06,615 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.