ETV Bharat / bharat

ದೇಶದಲ್ಲಿ 55 ಲಕ್ಷ ಜನರಿಗೆ ಕೋವಿಡ್​​... 45 ಲಕ್ಷ ಸೋಂಕಿತರು ಗುಣಮುಖ

author img

By

Published : Sep 22, 2020, 10:41 AM IST

ಭಾರತದಲ್ಲಿ ನಿನ್ನೆ ಒಂದೇ ದಿನ 9,33,185 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, 75,083 ಮಂದಿಯ ವರದಿ ಪಾಸಿಟಿವ್​ ಬಂದಿದೆ.

India's COVID case tally crosses 55-lakh mark
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ನವದೆಹಲಿ: ಜಾಗತಿಕ ಮಹಾಮಾರಿ ಕೊರೊನಾ ಭಾರತದಲ್ಲಿ ಬರೋಬ್ಬರಿ 55 ಲಕ್ಷ ಜನರಿಗೆ ತಗುಲಿದ್ದು, ಸುಮಾರು 45 ಲಕ್ಷ ರೋಗಿಗಳು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 75,083 ಸೋಂಕಿತರು ಪತ್ತೆಯಾಗಿದ್ದು, 1,053 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 55, 62,664 ಹಾಗೂ ಮೃತರ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 44,97,868 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 9,75,861 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಸೆಪ್ಟೆಂಬರ್ 21ರವರೆಗೆ 6,53,25,779 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 9,33,185 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.