ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮಾತ್ರ ತಗ್ಗುತ್ತಿಲ್ಲ, ಸೋಂಕಿನಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಕೂಡ ಕಡಿಮೆಯಾಗುತ್ತಿದೆ. ಸೆಪ್ಟೆಂಬರ್ನಲ್ಲಿ ಶೇ.1.75 ರಷ್ಟಿದ್ದ ಮರಣ ಪ್ರಮಾಣ ಇದೀಗ ಶೇ.1.49ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 46,964 ಸೋಂಕಿತರು ಪತ್ತೆಯಾಗಿದ್ದು, 470 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 81,84,083 ಹಾಗೂ ಮೃತರ ಸಂಖ್ಯೆ 1,22,111ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 74,91,513 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 5,70,458 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 31ರ ವರೆಗೆ 10,98,87,303 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,91,239 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.