ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,831 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 84 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,08,38,194 ಹಾಗೂ ಮೃತರ ಸಂಖ್ಯೆ 1,55,080ಕ್ಕೆ ಏರಿಕೆಯಾಗಿದೆ.
ಆದರೆ 1,05,34,505 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ. 97.19ಕ್ಕೆ ಏರಿಕೆಯಾಗಿದೆ. ಉಳಿದಂತೆ 1,48,609 ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಕಾಶ್ಮೀರದ ಗುಲ್ಮಾರ್ಗ್ನಲ್ಲಿ ನಡುಗಿದ ಭೂಮಿ.. 3.5 ತೀವ್ರತೆ ದಾಖಲು
ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 58,12,362 ಮಂದಿಗೆ ಲಸಿಕೆ ನೀಡಲಾಗಿದೆ.
ಫೆಬ್ರವರಿ 7ರ ವರೆಗೆ 20 ಕೋಟಿಗೂ ಹೆಚ್ಚು ( 20,19,00,614) ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 5,32,236 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.