ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 63 ಲಕ್ಷ ಗಡಿ ದಾಟಿದ್ದು, ಇವರಲ್ಲಿ ಶೇ. 83.5ರಷ್ಟು ಅಂದರೆ 52 ಲಕ್ಷಕ್ಕೂ ಹೆಚ್ಚು ಮಂದಿ ಮಾರಣಾಂತಿಕ ವೈರಸ್ನಿಂದ ಚೇತರಿಸಿಕೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ 86,821 ಸೋಂಕಿತರು ಪತ್ತೆಯಾಗಿದ್ದು, 1,181 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,12,585 ಹಾಗೂ ಮೃತರ ಸಂಖ್ಯೆ 98,678ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 52,73,202 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,40,705 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
![India's COVID tally crosses 63-lakh mark](https://etvbharatimages.akamaized.net/etvbharat/prod-images/9004608_hfjh.jpg)
ಸೆಪ್ಟೆಂಬರ್ 30ರವರೆಗೆ 7,56,19,781 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 14,23,052 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.