ETV Bharat / bharat

4 ದಿನದಲ್ಲಿ ಲಕ್ಷ ತಲುಪುತ್ತಿದೆ ಸೋಂಕಿತರ ಸಂಖ್ಯೆ: ಒಂದೇ ದಿನ 27 ಸಾವಿರ ಪ್ರಕರಣ ಪತ್ತೆ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,20,916ಕ್ಕೆ ಹೆಚ್ಚಳವಾಗಿದ್ದರೆ, ಮೃತರ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ.

India's COVID19 case tally crosses 8 lakh mark
ಭಾರತದಲ್ಲಿ ಕೊರೊನಾ ಪ್ರಕರಣಗಳು
author img

By

Published : Jul 11, 2020, 10:13 AM IST

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್​ ಹರಡುತ್ತಿರುವ ಪ್ರಮಾಣ ಎಷ್ಟಿದೆ ಎಂದರೆ ಕೇವಲ ನಾಲ್ಕೇ ದಿನದಲ್ಲಿ ಲಕ್ಷ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದೀಗ ದೇಶದಲ್ಲಿ ಕೋವಿಡ್​ ಕೇಸ್​ಗಳ ಸಂಖ್ಯೆ 8 ಲಕ್ಷದ ಗಡಿ ದಾಟಿ ಮುನ್ನುಗ್ಗುತ್ತಿದೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 27,114 ಸೋಂಕಿತರು ಪತ್ತೆಯಾಗಿದ್ದು, 519 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 8,20,916ಕ್ಕೆ ಹಾಗೂ ಮೃತರ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ ಶೇ.62 ರಷ್ಟು ಅಂದರೆ 5,15,386 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 2,83,407 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.