ನವದೆಹಲಿ: ಭಾರತದಲ್ಲಿ ಕಳೆದ ಮೂರು ದಿನಗಳಿಂದ 80 ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 4 ಮಿಲಿಯನ್ (40 ಲಕ್ಷ) ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಈವರೆಗ ಅತಿ ಹೆಚ್ಚು ಕೇಸ್ಗಳು ಎಂಬಂತೆ ಬರೋಬ್ಬರಿ 86,432 ಸೋಂಕಿತರು ಪತ್ತೆಯಾಗಿದ್ದು, 1,089 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 40,23,179 ಹಾಗೂ ಮೃತರ ಸಂಖ್ಯೆ 69,561ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 31,07,223 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 8,46,395 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೆಪ್ಟೆಂಬರ್ 4ರ ವರೆಗೆ 4,77,38,491 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,59,346 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.