ನವದೆಹಲಿ: ಭಾರತದಲ್ಲಿ ನಿನ್ನೆ ಒಂದೇ ದಿನ ಸುಮಾರು 10 ಸಾವಿರ ಕೊರೊನಾ ಕೇಸ್ಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8 ಸಾವಿರದ ಗಡಿ ದಾಟಿದೆ. ಸಕ್ರಿಯ ಪ್ರಕರಣಗಳಿಗಿಂತ ಗುಣಮುಖವಾಗಿರುವ ಸಂಖ್ಯೆಯೇ ಅಧಿಕವಾಗಿರುವುದು ಭರವಸೆ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 9,996 ಸೋಂಕಿತರು ಪತ್ತೆಯಾಗಿದ್ದು, 357 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,86,579ಕ್ಕೆ ಹಾಗೂ ಮೃತರ ಸಂಖ್ಯೆ 8,102ಕ್ಕೆ ಏರಿಕೆಯಾಗಿದೆ.
ಖುಷಿಯ ವಿಚಾರವೆಂದರೆ ಒಟ್ಟು ಸೋಂಕಿತರ ಪೈಕಿ 1,41,029 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 1,37,448 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.