ETV Bharat / bharat

ದೇವನಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್​ ಆರಂಭ: ಮೊಯ್ಲಿಯಿಂದ ಉದ್ಘಾಟನೆ

ಇಂದಿರಾ ಕ್ಯಾಂಟೀನ್ ಸಾರ್ವಜನಿಕರಿಗೆ, ಬಡವರಿಗೆ ತುಂಬಾ ಅನುಕೂಲವಾಗಲಿದೆ. ಇದೇ ರೀತಿ ಇಂದಿರಾ ಕ್ಯಾಂಟೀನ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಥಾಪನೆ‌ ಮಾಡಲಾಗುತ್ತದೆ. ಇದರಿಂದ ಅಲ್ಲಿನ ಟ್ಯಾಕ್ಸಿ ಚಾಲಕರಿಗೆ ಕಡಿಮೆ ಹಣದಲ್ಲಿ ಹೊಟ್ಟೆ ತುಂಬ ಊಟ ಸಿಗಲಿದೆ ಎಂದು ವೀರಪ್ಪ ಮೊಯ್ಲಿ ಹೇಳಿದರು.

ಇಂದಿರಾ ಕ್ಯಾಂಟೀನ್ ಆರಂಭ
author img

By

Published : Feb 9, 2019, 2:04 PM IST

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸಂಸದ ವೀರಪ್ಪ ಮೊಯ್ಲಿ, ಸಚಿವ ಕೃಷ್ಣಬೈರೇಗೌಡ ಮತ್ತು ಶಾಸಕ ನಿಸರ್ಗ ನಾರಾಯಣಸ್ವಾಮಿ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದರು.

ಉದ್ಘಾಟನೆ ಬಳಿಕ ಸಚಿವ ಕೃಷ್ಣಬೈರೇಗೌಡ, ಸಂಸದ ವೀರಪ್ಪ ಮೊಯ್ಲಿ, ಶಾಸಕ ನಿಸರ್ಗ ನಾರಾಯಣಸ್ವಾಮಿ ಸೇರಿದಂತೆ ಪುರಸಭೆ ಅಧಿಕಾರಿಗಳು ಇಂದಿರಾ ಕ್ಯಾಂಟೀನ್​ನಲ್ಲಿ ತಯಾರಾದ ಕೇಸರಿ ಬಾತ್ ಮತ್ತು ಉಪ್ಪಿಟ್ಟನ್ನು ಬಡಿಸಿದರು. ಬಳಿಕ ತಾವೂ ಕೂಡ‌ ಕ್ಯಾಂಟೀನ್​ನಲ್ಲಿ ತಯಾರಾದ ಆಹಾರವನ್ನು ಸೇವಿಸಿದರು.

ಈ ವೇಳೆ ಮಾತವಾಡಿದ ಸಂಸದ ವೀರಪ್ಪ‌ ಮೊಯ್ಲಿ, ಇಂದಿರಾ ಕ್ಯಾಂಟೀನ್ ಸಾರ್ವಜನಿಕರಿಗೆ, ಬಡವರಿಗೆ ತುಂಬಾ ಅನುಕೂಲವಾಗಲಿದೆ. ಇದೇ ರೀತಿ ಇಂದಿರಾ ಕ್ಯಾಂಟೀನ್ಅ​ನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಥಾಪನೆ‌ ಮಾಡಲಾಗುತ್ತದೆ. ಇದರಿಂದ ಅಲ್ಲಿನ ಟ್ಯಾಕ್ಸಿ ಚಾಲಕರಿಗೆ ಕಡಿಮೆ ಹಣದಲ್ಲಿ ಹೊಟ್ಟೆ ತುಂಬ ಊಟ ಸಿಗಲಿದೆ ಎಂದರು.

ಇನ್ನು ದಿನನಿತ್ಯ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ರೈತರು ಹೋಟೆಲ್​ಗಳಿಗೆ ಹೋಗಿ 50-100 ರೂ. ಕೊಟ್ಟು ಊಟ ಮಾಡಬೇಕಾಗಿತ್ತು. ಇದೀಗ ಇಂದಿರಾ ಕ್ಯಾಂಟೀನ್​ನಲ್ಲಿ ಕಡಿಮೆ ಬೆಲೆಗೆ ಹೊಟ್ಟೆ ತುಂಬ ಊಟ ಸಿಗುವುದರಿಂದ ಸಾರ್ವಜನಿಕರಿಗೆ ತುಂಬಾ ಖುಷಿಯಾಗಿದೆ ಎಂದರು.

Intro:ದೇವನಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭ: ಮೊಯ್ಲಿಯಿಂದ ಉದ್ಘಾಟನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೂತನವಾಗಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಯ್ತು.. ಈ ಕ್ಯಾಂಟೀನ್ ನಿಂದ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ಬಡ ಜನರಿಗೆ ಅನುಕೂಲವಾಗಿದೆ.. ಅಲ್ಲದೇ ಕಳೆದ ಕಾಂಗ್ರೆಸ್ ಸರ್ಕಾರ ಆರಂಭಿಸಿದ ಇಂದಿರಾ ಕ್ಯಾಂಟೀನ್ ಅನ್ನು ಸಮ್ಮಿಶ್ರ ಸರ್ಕಾರದಲ್ಲಿ ಮುಂದುವರೆಸಿಕೊಂಡು ಹೋಗುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತವಾಗಿದೆ..

ಯೆಸ್, ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಇಂದಿರಾ ಕ್ಯಾಂಟೀನ್ ಹಳ್ಳಿಗಳಿಂದ ಕೂಡಿರುವ ಜಿಲ್ಲೆಗಳಿಗೂ ಪಸರಿಸಿದೆ.. ಅದರಂತೆ ಪ್ರತಿ ತಾಲೂಕಿನಲ್ಲೂ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಸರ್ಕಾರ‌ ಮುಂದಾಗಿದೆ..‌ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಿದ್ದು, ಉದ್ಘಾಟನೆ ಕೂಡ ಆಯ್ತು.. ಸಂಸದ ವೀರಪ್ಪ ಮೊಯ್ಲಿ, ಸಚಿವ ಕೃಣ್ಣಬೈರೇಗೌಡ ಮತ್ತು ಶಾಸಕ ನಿಸರ್ಗ ನಾರಾಯಣಸ್ವಾಮಿ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟನೆ ಮಾಡಿದ್ರು..

ಉದ್ಘಾಟನೆ ಬಳಿಕ ಸಚಿವ ಕೃಷ್ಚಬೈರೇಗೌಡ, ಸಂಸದ ವೀರಪ್ಪ ಮೊಯ್ಲಿ, ಶಾಸಕ ನಿಸರ್ಗ ನಾರಾಯಣಸ್ವಾಮಿ ಸೇರಿದಂತೆ ಪುರಸಭೆ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ನಲ್ಲಿ ತಯಾರಾದ ಕೇಸರಿಬಾತ್ ಮತ್ತು ಉಪ್ಪಿಟ್ಟನ್ನು ಬಡಿಸಿದರು.. ಬಳಿಕ ತಾವೂ ಕೂಡ‌ ಕ್ಯಾಂಟೀನ್ ನಲ್ಲಿ ತಯಾರಾದ ಆಹಾರವನ್ನು ಸೇವನೆ ಮಾಡಿದ್ರು.. ಇನ್ನು ಕಾರ್ಯಕ್ರಮಕ್ಕೆ ತಡವಾಗಿ ಬಂದರೂ ಕೂಡ ಜಿಲ್ಲೆಯ ಜಿಲ್ಲಾಧಿಕಾರಿ ಕರೀಗೌಡರು, ಸಾರ್ವಜನಿಕರಿಗೆ ಕೇಸರಿಬಾತ್ ಮತ್ತು ಉಪ್ಪಿಟ್ಟನ್ನು ಬಡಿಸಿ ತಾವೂ ಕೂಡ‌ ಇದೇ ಆಹಾರವನ್ನು ಸೇವನೆ‌ ಮಾಡಿ, ತುಂಬಾ ಹೊತ್ತು ಅಲ್ಲೇ ಕಾಲ ಕಳೆದರು..

ಇದೇ ವೇಳೆ ಮಾತವಾಡಿದ ಸಂಸದ ವೀರಪ್ಪ‌ಮೊಯ್ಲಿ ಅವರು, ಇಂದಿರಾ ಕ್ಯಾಂಟೀನ್ ಸಾರ್ವಜನಿಕರಿಗೆ ಬಡವರಿಗೆ ತುಂಬಾ ಅನುಕೂಲವಾಗಲಿದೆ.. ಇದೇ ರೀತಿ ಇಂದಿರಾ ಕ್ಯಾಂಟೀನ್ ಅನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಥಾಪನೆ‌ ಮಾಡಲಾಗುತ್ತದೆ. ಇದರಿಂದ ಅಲ್ಲಿನ ಟ್ಯಾಕ್ಸಿ ಚಾಲಕರಿಗೆ ಕಡಿಮೆ ಹಣದಲ್ಲಿ ಹೊಟ್ಟೆ ತುಂಬಾ ಊಟ ಸಿಗಲಿದೆ ಎಂದರು..

ಇನ್ನು ದಿನನಿತ್ಯ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ರೈತರು ಹೋಟೆಲ್ ಗಳಿಗೆ ಹೋಗಿ ಐವತ್ತು ನೂರು ರೂಪಾಯಿ ಕೊಟ್ಟು ಊಟ ಮಾಡಬೇಕಾಗಿತ್ತು.. ಇದೀಗ ಇಂದಿರಾ ಕ್ಯಾಂಟೀನ್ ನಲ್ಲಿ ಕಡಿಮೆ ಬೆಲೆಗೆ ಹೊಟ್ಟೆ ತುಂಬ ಊಟ ಸಿಗುವುದರಿಂದ ಸಾರ್ವಜನಿಕರಿಗೆ ತುಂಬಾ ಖುಷಿಯಾಗಿದೆ..

ಇಂದಿರಾ ಕ್ಯಾಂಟೀನ್ ದೇವನಹಳ್ಳಿಯಲ್ಲಿ ಆರಂಭವಾಗಿರುವುದು ಸಾರ್ವಜನಿಕರು ಮತ್ತು ಸ್ಥಳೀಯರಿಗೆ ತುಂಬಾ ಖುಷಿಯಾಗಿದೆ.. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸಮ್ಮಿಶ್ರ ಸರ್ಕಾರ ಮುಂದುವರೆಸಿಕೊಂಡು ಹೋಗ್ತಾ ಇದೆ.. ಇದರಿಂದ ಸರ್ಕಾರಕ್ಕೆ ಮತ್ತು ಅಧಿಕಾರಿಗಳು ಹಾಗೂ ರಾಜಕೀಯ ವ್ಯಕ್ತಿಗಳ ಪರವಾಗಿ ಜನರಿಗೆ ಒಳ್ಳೆಯ ಅಭಿಪ್ರಾಯ ಮೂಡುತ್ತದೆ.. ಇಂದಿನ ರುಚಿಯನ್ನು ಈ‌ ಇಂದಿರಾ ಕ್ಯಾಂಟೀನ್ ನಲ್ಲಿ ಮುಂದಿನ ದಿನಗಳಲ್ಲಿ ‌ಮುಂದುವರೆಸಿಕೊಂಡು ಹೋಗಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯ..

Body:ನೊ

Conclusion:ನೊ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.