ಇಂದೋರ್( ಮಧ್ಯಪ್ರದೇಶ): ಹೈದರಾಬಾದ್ ಉದ್ಯಮಿಯೊಬ್ಬರನ್ನು ಗುರಿಯಾಗಿಸಿಕೊಂಡು ಒಟ್ಟು 80 ಲಕ್ಷ ಹಣವನ್ನು ವಂಚಿಸಿರುವ ಘಟನೆ ಕನಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಣ ಡಬಲ್ಗೊಳಿಸಲಾವುದೆಂದು ಆಮಿಷವೊಡ್ಡುವ ಮೂಲಕ ಹೈದರಾಬಾದ್ ಉದ್ಯಮಿಗೆ 80 ಲಕ್ಷ ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಡಿಸೆಂಬರ್‌ನಲ್ಲಿ ವಂಚನೆ
ಕಳೆದ ವರ್ಷ ಡಿಸೆಂಬರ್‌ನಲ್ಲಿ ಕನಾಡಿಯಾದ ಪೊಲೀಸರು ಹೈದರಾಬಾದ್‌ನಲ್ಲಿ ಉದ್ಯಮಿಯೊಬ್ಬರ ದೂರಿನ ಮೇರೆಗೆ ನಾಲ್ಕು ಜನರ ವಿರುದ್ಧ ವಂಚನೆ ಮಾಡಿದ ಅಪರಾಧವನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಬಗ್ಗೆ ಶೋಧ ಕಾರ್ಯ ನಡೆಸುತ್ತಿದ್ದೇವೆ ಎಂದು ಕನಾಡಿಯಾ ಪೊಲೀಸ್ ಠಾಣೆಯ ಇನ್ಚಾರ್ಜ್ ರಾಜೀವ್ ಭದೌರಿಯಾ ಹೇಳಿದ್ದಾರೆ.
ಇಂದೋರ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪ್ರಕರಣಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.