ಇಂದೋರ್ (ಮಧ್ಯಪ್ರದೇಶ ) : ಕೋವಿಡ್-19 ಸ್ಯಾಂಪಲ್ ಪರೀಕ್ಷಾ ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಾತ್ಮ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜಿನ ವೈದ್ಯನಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಮನೋಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ವೈರಾಲಜಿ ಲ್ಯಾಬ್ನಲ್ಲಿ ದಾಖಲೆಗಳ ನಿರ್ವಹಣೆಗೆಂದು ಹೆಚ್ಚುವರಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಸೋಂಕು ತಗುಲಿರುವ ಶಂಕೆಯಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಲೇಜು ಅಧಿಕಾರಿಗಳು, ಪ್ರಯೋಗಾಲಯದಲ್ಲಿ ನಡೆಯುತ್ತಿದ್ದ ಸ್ಯಾಂಪಲ್ಸ್ ಪರೀಕ್ಷೆಗೂ ವೈದ್ಯನಿಗೂ ಯಾವುದೇ ಸಂಬಂಧವಿಲ್ಲರಲಿಲ್ಲ. ಸೋಂಕಿತ ವೈದ್ಯನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.