ಕೋಲ್ಕತಾ (ಪಶ್ಚಿಮ ಬಂಗಾಳ): ಅಂಫಾನ್ ಚಂಡಮಾರುತದಿಂದಾದ ಹಾನಿಯ ಸರಿಪಡಿಸುವಿಕೆ ಹಾಗೂ ಕೊರೊನಾ ವೈರಸ್ ಬಿಕ್ಕಟ್ಟಿನ ನಡುವೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.
2021ರ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯಲ್ಲಿ ಅಸಮಾಧಾನ ಕಂಡುಬರುತ್ತಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಹತ್ತು ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಪಕ್ಷದ ಶ್ರೇಣಿ ಮತ್ತು ವಿವಿಧ ವಿಷಯಗಳ ಬಗ್ಗೆ ಅಸಮಧಾನ ಹೆಚ್ಚುತ್ತಿರುವುದ ಟಿಎಂಸಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಈ ನಡುವೆ, ಹೆಚ್ಚಿನ ಟಿಎಂಸಿ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷದ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ಟಿಎಂಸಿಗೆ ಪ್ರಮುಖ ಚಾಲೆಂಜರ್ ಆಗಿ ಹೊರಹೊಮ್ಮುವುದರೊಂದಿಗೆ ರಾಜ್ಯ ರಾಜಕಾರಣದಲ್ಲಿಯೂ ಸವಾಲಾಗಿ ಪರಿಣಮಿಸುವ ಸಾಧ್ಯತೆ ಎದ್ದು ಕಾಣುತ್ತದೆ.
ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 18ರಲ್ಲಿ ಬಿಜೆಪಿ ಜಯಗಳಿಸಿತ್ತು. ಟಿಎಂಸಿ 22 ಸ್ಥಾನ ಗೆದ್ದಿದ್ದರೂ, ಬಿಜೆಪಿ ಕಠಿಣ ಸ್ಪರ್ಧೆ ನೀಡಿತ್ತು.