ಜೈಪುರ: ಇಂದಿನಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದ್ದು, ಕಾಂಗ್ರೆಸ್ ವಿಶ್ವಾಸಮತ ನಿರ್ಣಯ ಮಂಡಿಸಲಿದೆ. ಈ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ ಬಿಜೆಪಿ, ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಗುರುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರಿಗೆ ಪ್ರತಿಪಕ್ಷದ ನಾಯಕ ಗುಲಾಬ್‌ಚಂದ್ ಕಟಾರಿಯಾ ಮತ್ತು ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್ ಅವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಕಾಂಗ್ರೆಸ್ ಶಾಸಕರೊಂದಿಗೆ ಕುಳಿತುಕೊಳ್ಳದಂತೆ ಸೂಚನೆ ನೀಡಲಾಗಿದೆ. ಪಕ್ಷದ ಅನುಮತಿಯಿಲ್ಲದೇ ಯಾವುದೇ ಕಾರಣಕ್ಕೂ ಸದನದಿಂದ ಹೊರ ಹೋಗುವಂತಿಲ್ಲ ಎಂದು ಶಾಸಕರಿಗೆ ಸೂಚನೆ ನೀಡಲಾಗಿದೆ.
ಶಾಸಕರಿಗೆ ಇಂತಹ ನಿರ್ದೇಶನಗಳನ್ನು ನೀಡುತ್ತಿರುವುದು ಇದೇ ಮೊದಲು. ಸಾಮಾನ್ಯವಾಗಿ, ಎರಡೂ ಪಕ್ಷಗಳ ಶಾಸಕರು ಅಧಿವೇಶನದಲ್ಲಿ ಪರಸ್ಪರ ಕುಳಿತುಕೊಳ್ಳುತ್ತಾರೆ. ಅಷ್ಟೇ ಅಲ್ಲ, ಅನೇಕ ಶಾಸಕರು ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಲು ಸಚಿವರ ಬಳಿ ಕುಳಿತಿರುವುದು ಕಂಡು ಬರುತ್ತದೆ. ಆದರೆ, ಬಿಜೆಪಿ ಅವಿಶ್ವಾಸ ನಿರ್ಣಯ ಸಾಬೀತಿಗೆ ಪ್ರಯತ್ನಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪಕ್ಷದ ಶಾಸಕರ ಒಗ್ಗಟ್ಟನ್ನು ತೋರಿಸಲು ಈ ಸೂಚನೆಗಳನ್ನು ನೀಡಲಾಗಿದೆ ಎನ್ನಲಾಗುತ್ತಿದೆ.